ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡಿನ ಹಲವಡೆ ಭಾರೀ ಮಳೆಯಾಗುತ್ತಿದ್ದು, ಈ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಳಗಾವಿ, ಬೀದರ್,ಕಲಬುರಗಿ, ಬಾಗಲಕೋಟೆ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.