ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ತಂಡ ಜಾರಿಗೆ ತಂದಿದೆ. ತಾವು ನುಡಿದಂತೆ ನಡೆಯುತ್ತ...
ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ತಂಡ ಜಾರಿಗೆ ತಂದಿದೆ. ತಾವು ನುಡಿದಂತೆ ನಡೆಯುತ್ತೇವೆ ಎಂದು ಚುನಾವಣೆಗೂ ಮುನ್ನವೇ ಹೇಳಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು ಅಂತೆಯೇ ತಾವು ಪ್ರಣಾಳಿಕೆಯನ್ನು ಹೇಳಿರುವ ಎಲ್ಲ ಯೋಜನೆಗಳನ್ನು ಈ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಯೋಜನೆಗಳ ಬಗ್ಗೆ ಸಾಕಷ್ಟು ಗೊಂದಲಗಳು ಕೂಡ ಏರ್ಪಟ್ಟಿತ್ತು. ಮುಖ್ಯವಾಗಿ ಶಕ್ತಿ ಯೋಜನೆಯ ಬಗ್ಗೆ.
ನಿಂತು ಹೋಗುತ್ತಾ ಶಕ್ತಿ ಯೋಜನೆ?
ಈಗಾಗಲೇ ಶಕ್ತಿ ಯೋಜನೆ ನಿಂತು ಹೋಗುತ್ತದೆ ಎಂದು ಹಲವರು ಹೇಳುತ್ತಿದ್ದಾರೆ. ಅದರಲ್ಲೂ ಸೋಶಿಯಲ್ ಮೀಡಿಯಾದಲ್ಲಿ(Social Media) ಈ ವಿಷಯದ ಬಗ್ಗೆ ಸಾಕಷ್ಟು ಪ್ರಚಾರ ಕೂಡ ನಡೆದಿದೆ. ಶಕ್ತಿಯ ಯೋಜನೆಯ ಅಡಿಯಲ್ಲಿ ಮಹಿಳೆಯರು ರಾಜ್ಯ ಸಾರಿಗೆಯಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಕೆಎಸ್ಆರ್ಟಿಸಿ ಯ 4 ವಿಭಾಗಗಳ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೆ ಉಚಿತವಾಗಿ ಪ್ರಯಾಣ ಮಾಡಬಹುದು. ಶಕ್ತಿ ಯೋಜನೆ ಜಾರಿಗೆ ಬರುತ್ತಿದ್ದ ಹಾಗೆ ಮಹಿಳೆಯರಲ್ಲಿ ಸಂತಸ ಮನೆಮಾಡಿದೆ ಈಗಾಗಲೇ ಲಕ್ಷಾಂತರ ಮಹಿಳೆಯರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದು ಕೇವಲ ತಮ್ಮ ಆಧಾರ್ ಕಾರ್ಡ್ ತೋರಿಸಿದರೆ ಸಾಕು ಕರ್ನಾಟಕದಾದ್ಯಂತ ಎಲ್ಲಿಂದ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದು.
ಆದರೆ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಗಳಲ್ಲಿ ಶಕ್ತಿ ಯೋಜನೆ ನಿಂತು ಹೋಗುವ ಸಾಧ್ಯತೆ ಇದೆ ಎಂಬುದು ಹೆಚ್ಚಾಗಿ ಪ್ರಚಾರವಾಗಿತ್ತಿದೆ. ಸಾರಿಗೆ ಇಲಾಖೆಗೆ ಸರ್ಕಾರದಿಂದ ಸಲ್ಲಬೇಕಾದ ಹಣ ಕೂಡ ಸಂದಾಯವಾಗಿಲ್ಲ ಎನ್ನುವ ಮಾಹಿತಿಯೂ ಇದೆ. ಇದರಿಂದ ಸಾಕಷ್ಟು ಮಹಿಳೆಯರು ಆತಂಕಕ್ಕೆ ಒಳಗಾಗಿದ್ದು ಇದೆ. ಇದೀಗ ಶಕ್ತಿ ಯೋಜನೆಯ ಬಗ್ಗೆ ಬರುತ್ತಿರುವ ಮಾತುಗಳನ್ನು ಕೇಳಿ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ,
ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಪಡೆಯುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, “ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು, ಈಗ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂತಹ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ. ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ’. ಎಂಬುದಾಗಿ ಶಕ್ತಿ ಯೋಜನೆ ನಿಂತು ಹೋಗೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಹಾಗಾಗಿ ಮಹಿಳೆಯರು ಆತಂಕ ಪಟ್ಟು ಕೊಡುವ ಅಗತ್ಯವಿಲ್ಲ ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ. ಇನ್ನು ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು ಎಂದು ಸರ್ಕಾರ ಈ ಹಿಂದೆ ಹೇಳಿಕೊಂಡಿತ್ತು. ಆದರೆ ಇತ್ತೀಚಿನ ವರದಿಯ ಪ್ರಕಾರ ಸ್ಮಾರ್ಟ್ ಕಾರ್ಡ್ ಬದಲು ಸಾಮಾನ್ಯ ಬಸ್ ಪಾಸ್ ನೀಡಲು ಸರ್ಕಾರ ನಿರ್ಧರಿಸಿದೆ. ಸದ್ಯದಲ್ಲಿ ಬಸ್ ಪಾಸ್ ವಿತರಣೆ ಕೂಡ ಆರಂಭವಾಗಬಹುದು.