ಪ್ರಸಕ್ತ ಶೈಕ್ಷಣಿಕ ವರ್ಷದಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗು 11 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ನಡೆಸಲು ಷರತ್ತುಗಳನ್ನು ವಿ...
ಪ್ರಸಕ್ತ ಶೈಕ್ಷಣಿಕ ವರ್ಷದಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗು 11 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ನಡೆಸಲು ಷರತ್ತುಗಳನ್ನು ವಿಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು : ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2(SA-2)ಹಾಗು 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದಲೇ ನಡೆಸುವಂತೆ 12 ಷರತ್ತುಗಳೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.