ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯಕ್ಕೆ ಐವರು ಪ್ರಯಾಣಿಕರು ಸಾವಿಗೀಡಾಗಿ ಆರಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡ...
ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯಕ್ಕೆ ಐವರು ಪ್ರಯಾಣಿಕರು ಸಾವಿಗೀಡಾಗಿ ಆರಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಕಳೆದ ಮಧ್ಯರಾತ್ರಿ ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ)ರಲ್ಲಿ ಸೋಮವಾರ
ಮುಂಜಾನೆ ಇಂಡಿಕೇಟರ್ ಹಾಕದೆ ರಸ್ತೆಬದಿ ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ
ಗಾಯಗೊಂಡಿದ್ದ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45), ರಾಯಚೂರು ಜಿಲ್ಲೆಯ ಮಸ್ಕಿ ಮೂಲದ ರಮೇಶ್ (40), ಮಾನವಿ ಮೂಲದ ನರಸಪ್ಪ (5), ಆಲಾಪುರ
ಮೂಲದ ರವಿ (23) ಹಾಗೂ ರಾಯಚೂರಿನ ಮಾಬಮ್ಮ (35) ಗುರುತಿಸಲಾಗಿದೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಐವರನ್ನು ಮತ್ತು ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಮೂವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.