Gruha Lakshmi: ಗೃಹಲಕ್ಷ್ಮಿ ಯೋಜನೆಯ ₹2000 ನಿಮ್ಮ ಖಾತೆಗೆ ಬಂದಿಲ್ವಾ? 4000 ಒಟ್ಟಿಗೆ ಬರುತ್ತಾ? ಇಲ್ಲಿದೆ ಮಾಹಿತಿ.. ಮಹಿಳೆಯರ ಆರ್ಥಿಕ ಸಬಲೀಕರಣ ಹೆ...
Gruha Lakshmi: ಗೃಹಲಕ್ಷ್ಮಿ ಯೋಜನೆಯ ₹2000 ನಿಮ್ಮ ಖಾತೆಗೆ ಬಂದಿಲ್ವಾ? 4000 ಒಟ್ಟಿಗೆ ಬರುತ್ತಾ? ಇಲ್ಲಿದೆ ಮಾಹಿತಿ..
ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕೂಡ ಜಾರಿ ಮಾಡಿ ಮೊದಲ ಕಂತಿನ ಹಣವನ್ನು ನೀಡಲಾಗಿದೆ. ಆದರೆ ಈವರೆಗೆ ಅರ್ಜಿಸಲ್ಲಿಸಿದ ಸುಮಾರು 9,44,155 ಅರ್ಜಿದಾರರಿಗೆ ಹಣ ತಲುಪಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದಂತೆ ಯುವನಿಧಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳನ್ನ ಜಾರಿಗೆ ತಂದಿದೆ. ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕೊರತೆಯಿಂದ 5 ಕೆಜಿ ಅಕ್ಕಿ ನೀಡಿ 5 ಕೆಜಿಗೆ ಹಣವನ್ನು ನೀಡುತ್ತಿದೆ.
ಇನ್ನು ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ ಮೊದಲ ಕಂತಿನ ಹಣವನ್ನು ನೀಡಲಾಗಿದೆ. ಈವರೆಗೆ ಅರ್ಜಿಸಲ್ಲಿಸಿದ ಸುಮಾರು 9,44,155 ಅರ್ಜಿದಾರರಿಗೆ ಹಣ ತಲುಪಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅರ್ಜಿಸಲ್ಲಿಸಿರುವವರಲ್ಲಿ 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಇದಕ್ಕೆ ಕಾರಣ ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದೆ. ಈಗಾಗಲೇ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವೆ ತಿಳಿಸಿದ್ದಾರೆ.
ಇನ್ನು 5,96,268 ಫಲಾನುಭವಿಗಳ ಖಾತೆ ಆಧಾರ್ ಕಾರ್ಡ್ಗೆ ಲಿಂಕ್ ಆಗಿಲ್ಲ. ಆದರೆ 2,17,536 ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್ ನೊಂದಿಗೆ ಲಿಂಕ್ ಆಗಿದ್ದು, ಅವರಿಗೆ ಯೋಜನೆಯ ಹಣ ಹೋಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ.
ಸುಮಾರು 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಒಟ್ಟಾರೆ ಯೋಜನೆಯ 1.8 ಕೋಟಿ ಅರ್ಹ ಫಲಾನುಭವಿಗಳಿಗೆ ಆಗಸ್ಟ್ 30 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ.
ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂಪಾಯಿ ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾರ್ಳಕರ್ ತಿಳಿಸಿದ್ದಾರೆ
ಅಕ್ಟೋಬರ್ 13ರವರೆಗೆ ಅಗತ್ಯ ಇರುವ ತಿದ್ದುಪಡಿಯನ್ನು ಮಾಡಿಕೊಂಡರೆ ನವರಾತ್ರಿ ಹಬ್ಬಕ್ಕೆ ಮನೆ ಯಜಮಾನಿಯರಿಗೆ 2ನೇ ಕಂತಿನ ಹಣ ಹಾಗೂ ಮೊದಲ ಕಂತು ಬರದೇ ಇರುವವರಿಗೆ ಒಟ್ಟಿಗೆ 4000 ಹಣ ಜಮಾ ಆಗಲಿದೆ ಎಂದು ತಿಳಿದುಬಂದಿದೆ.