ಬೆಂಗಳೂರು : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಕಾರು ಡಿಕ್ಕಿಯಾಗಿದ್ದ ಪರಿಣಾಮ, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿ...
ಬೆಂಗಳೂರು : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಕಾರು ಡಿಕ್ಕಿಯಾಗಿದ್ದ ಪರಿಣಾಮ, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಕನಕಪುರ ರಸ್ತೆಯಲ್ಲಿ ನಡೆದಿರುವಂತಹ ಅಪಘಾತವಾಗಿದ್ದು, ನಟ ನಾಗಭೂಷಣ ವಿರುದ್ಧ ಅಪಘಾತ ಪ್ರಕರಣ ದಾಖಲಾಗಿದೆ.
ವಸಂತಪುರ ರಸ್ತೆಯ ಅಪಾರ್ಟ್ಮೆಂಟ್ ಬಳಿ ಫುಟ್ ಬಾತ್ ಮೇಲೆ ಗಂಡ ಹೆಂಡತಿ ನಡೆದುಕೊಂಡು ಹೋಗುವಂತ ಸಂದರ್ಭದಲ್ಲಿ ದಂಪತಿಗೆ ಕಾರು ಡಿಕ್ಕಿಯಾಗಿದ್ದು, ಇ ವೇಳೆ ಪತ್ನಿ ಸಾವನಪ್ಪಿದ್ದಾಳೆ.
ಇನ್ನೂ ಕಾರು ಅಪಘಾತದಲ್ಲಿ ಪತಿ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟ ಮಹಿಳೆಯನ್ನು ಪ್ರೇಮಾ ಎಂದು ಗುರುತಿಸಲಾಗಿದ್ದು, ಪತಿ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.ಪ್ರಕರಣಕ್ಕೆ ಸಂಬಂಧಸಿದಂತೆ ಕೆ.ಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ನಟ ನಾಗಭೂಷಣ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.