ಬಾಸ್ (Bigg Boss Kannada) ಮನೆಯಿಂದ ನಿನ್ನೆಯಷ್ಟೇ ಬಂಧಿಸಿ ಕರೆದುಕೊಂಡು ಬಂದಿರುವ ವರ್ತೂರ್ ಸಂತೋಷ್ (Varthuru Santhosh) ಹಲವು ಮಾಹಿತಿಗಳನ್ನು ಅರ...
ಬಾಸ್ (Bigg Boss Kannada) ಮನೆಯಿಂದ ನಿನ್ನೆಯಷ್ಟೇ ಬಂಧಿಸಿ ಕರೆದುಕೊಂಡು ಬಂದಿರುವ ವರ್ತೂರ್ ಸಂತೋಷ್ (Varthuru Santhosh) ಹಲವು ಮಾಹಿತಿಗಳನ್ನು ಅರಣ್ಯ ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎನ್ನುವ ಮಾಹಿತಿ ಇದೆ. ತನ್ನ ಬಳಿ ಇರುವುದು ಒರಿಜಿನಲ್ ಹುಲಿ ಉಗುರು ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಹುಲಿ ಉಗುರಿನ ಮೂಲ ಹುಡುಕುತ್ತಾ ಇದ್ದಾರಂತೆ ಅರಣ್ಯ ಅಧಿಕಾರಿಗಳು.
ಸಂತೋಷ್ ಅವರು ಯಾರಿಂದ ಹುಲಿ ಉಗುರು ಪಡೆದುಕೊಂಡರು ಎನ್ನವ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದು ನಾನ್ ಬೇಲ್ ಬೆಲ್ ಕೇಸ್ ಆಗಿರುವುದರಿಂದ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅವರನ್ನು ಪ್ರೊಡ್ಯೂಸ್ ಮಾಡಲಾಗುತ್ತೆ ಎಂದಿದ್ದಾರೆ ವಲಯ ಅರಣ್ಯ ಅಧಿಕಾರಿಗಳು. ಅವರ ಬಳಿ ಇರುವುದು ಒರಿಜನ್ ಹುಲಿ ಉಗುರು ಎಂದು ಕೋರ್ಟ್ ನಲ್ಲಿ ಸಾಬೀತು ಆದರೆ, ಮೂರರಿಂದ ಏಳು ವರ್ಷ ಜೈಲು ಶಿಕ್ಷೆಯಿದೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿ, ಸದ್ಯ ಅರಣ್ಯಾಧಿಕಾರಿಗಳಿಂದ ಸಂತೋಷ್ ಅವರ ವಿಚಾರಣೆ ನಡೆಯುತ್ತಿದೆ.
ಈ ಕುರಿತು ದೂರು ನೀಡಿರುವ ಶರತ್ ಮಾಧ್ಯಮಗಳ ಜೊತೆ ಮಾತನಾಡಿ, ‘ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿಯುಗುರು ಇರುವ ಪದಕವನ್ನು ಅವರು ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆಯ ಪ್ರಕಾರ ತಪ್ಪು. ಸೆಲೆಬ್ರಿಟಿಗಳು ರೂಲ್ಸ್ ಪಾಲನೆ ಮಾಡಬೇಕು. ಈ ರೀತಿ ಹುಲಿಯುಗುರಿನ ಪದಕ ಧರಿಸೋದು ತಪ್ಪು. ಅದು ಒರಿಜಿನಲ್ಲೋ ಅಥವಾ ಡೂಪ್ಲಿಕೇಟ್ ಅನ್ನೋದು ಫಾರೆನ್ಸಿಕ್ ನವರು ಡಿಸೈಡ್ ಮಾಡಬೇಕು’ ಎಂದರು.
ಬೆಳ್ಳಂಬೆಳಗ್ಗೆ ರಾಮನಗರ ಪೊಲೀಸರು ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದರು. ಬಿಗ್ ಬಾಸ್ ತಂಡಕ್ಕೆ ವಿವರಗಳನ್ನು ತಿಳಿಸಿದ ಬಳಿಕ ಸಂತೋಷ್ ಅವರನ್ನು ವಶಕ್ಕೆ ಪಡೆದುಕೊಂಡರು. ನಂತರ ಅವರನ್ನು ಬಿಗ್ ಬಾಸ್ ಮನೆಯಿಂದ ಕರೆದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.