BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಇಂದಿನಿಂದಲೇ ಈ ಅವಕಾಶ ನೀಡಿದ ಸರ್ಕಾರ.. ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ...
BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಇಂದಿನಿಂದಲೇ ಈ ಅವಕಾಶ ನೀಡಿದ ಸರ್ಕಾರ..
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ. ಇಂದಿನಿಂದ 9 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ . ಅಂದರೆ ಇಂದಿನಿಂದ ಅಕ್ಟೋಬರ್ 13 ರವರೆಗೆ ಪಡಿತರಾ ಚೀಟಿಯಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
5ರಿಂದ 13ರವರೆಗಗೂ ತಿದ್ದುಪಡಿಗೆ ಅವಕಾಶ :
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ರೇಶನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆಯನ್ನು ವಿಭಾಗವಾರುಗಳಂತೆ ವಿಂಗಡಿಸಲಾಗಿದ್ದು, ಪ್ರತಿ ವಿಭಾಗಕ್ಕೆ ತಲಾ ಮೂರು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿ ಕೊಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅವಕಾಶ :
ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಎಪಿಎಲ್, ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಗಸ್ಟ್ 5ರಿಂದ 7ರವರೆಗೂ ಇಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ವಿಶೇಷ ಎಂದರೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ರೇಶನ್ ಕಾರ್ಡ್ ಎಲ್ಲಿ ತಿದ್ದುಪಡಿ ಮಾಡಿಸಬಹುದು ? :
ಕಳೆದ ತಿಂಗಳು ಕೂಡಾ ಆಹಾರ ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದರೆ ಸರ್ವರ್ ಡೌನ್ ಆಗಿ ಸಾರ್ವಜನಿಕರಿಗೆ ಈ ಅವಕಾಶವನ್ನು ಬಳಸಿಕೊಳ್ಳುವುದು ಸಾಧ್ಯವಾಗಿರಲಿಲ್ಲ. ತಿದ್ದುಪಡಿ ಮಾಡಿಸಲು ಬಂದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಸರ್ಕಾರ ಈ ಅವಕಾಶ ನೀಡಿದೆ. ಸೇವಾ ಕೇಂದ್ರದಲ್ಲಿ ಮಾತ್ರ ಈ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇನ್ನು, ರೇಷನ್ ಕಾರ್ಡ್ ತಿದ್ದುಪಡಿಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಕಂಪ್ಯೂಟರ್ ಅವಶ್ಯವಾಗಿದ್ದು, ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ತಿದ್ದುಪಡಿ ಮಾಡಿಸಬಹುದಾಗಿದೆ.
ಏನೇನು ತಿದ್ದುಪಡಿ ಮಾಡಬಹುದು?
1. ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ
2. ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ
3. ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
4. ಮಹಿಳೆಯನ್ನು ಮನೆಯ ಯಜಮಾನಿ ಎಂದು ಎಂದು ಇಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.
1) ಅಕ್ಟೋಬರ್ 5 ರಿಂದ 7 ರವರೆಗೆ
ಬೆಂಗಳೂರು ನಗರ, ಬೆಂಗಳೂರು
ಗ್ರಾಮಾಂತರ ಜಿಲ್ಲೆಗಳಲ್ಲಿ ಬೆಳಗ್ಗೆ 10
ಗಂಟೆಯಿಂದ ಸಂಜೆ 7 ಗಂಟೆವರೆಗೆ ಪಡಿತರ
ಚೀಟಿ ತಿದ್ದುಪಡಿ ಮತ್ತು ಸೇರ್ಪಡೆಗೆ ಅವಕಾಶ
ನೀಡಲಾಗಿದೆ.
2) ಅಕ್ಟೋಬರ್ 8 ರಿಂದ 10 ರವರೆಗೆ
ಬಾಗಲಕೋಟೆ, ಚಾಮರಾಜನಗರ, ಬೆಳಗಾವಿ,
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ,
ಹಾಸನ, ಗದಗ, ಕಾವೇರಿ, ಕೊಡಗು,
ಮೈಸೂರು, ಉಡುಪಿ, ಉತ್ತರ ಕನ್ನಡ,
ವಿಜಯಪುರ ಜಿಲ್ಲೆಯಲ್ಲಿ ಅವಕಾಶ
ನೀಡಲಾಗುತಿದೆ.
3) ಅಕ್ಟೋಬರ್ 11 ರಿಂದ 13 ರವರೆಗೆ ಬಳ್ಳಾರಿ,
ಕಲಬುರಗಿ, ಚಿಕ್ಕಬಳ್ಳಾಪುರ, ಬೀದರ್,
ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ,
ರಾಯಚೂರು, ರಾಮನಗರ, ಶಿವಮೊಗ್ಗ
ತುಮಕೂರು, ಯಾದಗಿರಿ, ವಿಜಯನಗರ ಸೇರಿ
ಒಟ್ಟು 14 ಜಿಲ್ಲೆಗಳಲ್ಲಿ ತಿದ್ದುಪಡಿ ಮತ್ತು
ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.