ಜೂ. 12 ರಂದು ಅಥಣಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ .. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಲೂಕ ಪಂಚಾಯತ್ ಸಭಾಭವನದಲ್ಲಿ ಜೂ.12ರಂದು ಬೆಳಗ್ಗೆ 11 ಗಂಟ...
ಜೂ. 12 ರಂದು ಅಥಣಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ..
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಲೂಕ ಪಂಚಾಯತ್ ಸಭಾಭವನದಲ್ಲಿ ಜೂ.12ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಅಥಣಿ ತಾಲೂಕಿನ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೋಳ್ಳಲಾಗಿದೆ. ಸರ್ಕಾರಿ ಕಛೇರಿಯಲ್ಲಿನ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಲು ಈಮೂಲಕ ತಿಳಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ ಗುಪ್ತವಾಗಿ ಮಾಹಿತಿ ನೀಡಿ, ಸದರಿ ಸಭೆಯ ಸದುಪಯೋಗ ಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0831-2950756 ಅಥವಾ 0831-2421922 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಕರ್ನಾಟಕಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿನಿಧಿ ಅಲ್ಲಾವುದ್ದೀನ್ ಶೇಕ್ ಚಿಕ್ಕೋಡಿ